ರಾಹುಲ್​ ರಾಜೀನಾಮೆ ನೀಡಿದ್ರೆ ಕಾರ್ಯಕರ್ತರು ಆತ್ಮಹತ್ಯೆ ಮಾಡಿಕೊಳ್ತಿದ್ರು: ಪಿ.ಚಿದಂಬರಂ

ನವದೆಹಲಿ: 2019ರ ಲೋಕಸಭಾ ಚುನಾವಣೆಯ ಹೀನಾಯ ಸೋಲಿನ ಬಳಿಕ, ಸೋಲಿನ ಹೊಣೆ ಹೊತ್ತು ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ತಮ್ಮ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಅಂತಾ ಹೇಳಲಾಗುತ್ತಿತ್ತು. ಇಂದು ಕಾಂಗ್ರೆಸ್​ CWC ಸಭೆಯಲ್ಲೂ ಕೂಡಾ ಈ ವಿಚಾರ ಪ್ರಸ್ತಾಪ ಮಾಡಲಾಗಿತ್ತು. ಆದ್ರೆ ಸಭೆಯಲ್ಲಿ ಭಾಗಿಯಾಗಿದ್ದ ಮುಖಂಡರು ರಾಹಲ್​ ಗಾಂಧಿ ರಾಜೀನಾಮೆಯನ್ನು ತಿರಸ್ಕರಿಸಿದ್ದಾರೆ.

ಸಭೆಯಲ್ಲಿ ರಾಹುಲ್​ ಗಾಂಧಿ ರಾಜೀನಾಮೆ ವಿಚಾರ ಪ್ರಸ್ತಾಪವಾಗುತ್ತಿದ್ದಂತೆ, ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್​ ಹಿರಿಯ ಮುಖಂಡ ಪಿ. ಚಿದಂಬರಂ, ‘ರಾಹುಲ್​ ಗಾಂಧಿ ನೀವು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಿದ್ರೆ, ದಕ್ಷಿಣ ಭಾರತದ ಕಾಂಗ್ರೆಸ್​ ಕಾರ್ಯಕರ್ತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಹಾಗಾಗಿ ನೀವು ರಾಜೀನಾಮೆ ಪ್ರಸ್ತಾಪವನ್ನು ಮಾಡಬಾರದು ಅಂತಾ ಪಿ. ಚಿದಂಬರಂ ಸಭೆಯಲ್ಲಿ ಭಾವನಾತ್ಮಕವಾಗಿ ಹೇಳಿದ್ದಾರೆ ಎಂದು ಮಾಧ್ಯಮ ಒಂದ್ರಲ್ಲಿ ವರದಿಯಾಗಿದೆ.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv