ಸರ್ಕಾರ ಸುಭದ್ರವಾಗಿದೆ, ಯಾರು ರಾಜೀನಾಮೆ ಕೊಡುವುದಿಲ್ಲ: ಪರಮೇಶ್ವರ್ ನಾಯಕ್

ದಾವಣಗೆರೆ: ಸರ್ಕಾರ ಸುಭದ್ರವಾಗಿದೆ. ಇಬ್ಬರು ಶಾಸಕರು ಹೋದಾಕ್ಷಣ ಸರ್ಕಾರಕ್ಕೆ ಅಪಾಯವಿಲ್ಲ ಎಂದು ಮುಜರಾಯಿ ಸಚಿವ ಪಿ.ಟಿ ಪರಮೇಶ್ವರ್ ನಾಯಕ್ ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಸರ್ಕಾರ ಸುಭದ್ರವಾಗಿದೆ. ಪಕ್ಷೇತರರು ಬೆಂಬಲ ವಾಪಸ್ಸು ತೆಗೆದುಕೊಂಡಿರುವ ಬಗ್ಗೆ ಮಾಹಿತಿ ಇಲ್ಲ. ಬಿಜೆಪಿಗೆ ಹೋದಾಕ್ಷಣ ಸರ್ಕಾರಕ್ಕೆ ಅಪಾಯವಿಲ್ಲ. ಮಾಧ್ಯಮದವರು ಇದನ್ನು ಸೀರಿಯಲ್ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಶಾಸಕರು ಯಾರು ರಾಜೀನಾಮೆ ಕೊಡುವುದಿಲ್ಲ. ನಮ್ಮ ಹೈಕಮಾಂಡ್ ಎಲ್ಲವನ್ನು ನಿಭಾಯಿಸುತ್ತಿದೆ. ಯಾವ ಶಾಸಕರು ಸಚಿವರಿಗೆ ಬೆಂಗಳೂರಿಗೆ ಬರುವಂತೆ ಹೈಕಮಾಂಡ್ ಹೇಳಿಲ್ಲ ‌ಎಂದು ಸಚಿವ ಪಿ.ಟಿ ಪರಮೇಶ್ವರ್ ನಾಯಕ್ ಹೇಳಿದ್ರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv