ಭಾರೀ ಮಳೆ: ಉಕ್ಕಿ ಹರಿಯುತ್ತಿದೆ ಫಲ್ಗುಣಿ ನದಿ

ಮಂಗಳೂರು: ಈಗಾಗಲೇ ಮುಂಗಾರು ಮಳೆ ಶುರುವಾಗಿದ್ದು, ರಾಜ್ಯದ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಇದರಿಂದಾಗಿ ಹಲವು ನದಿ, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಮಂಗಳೂರಿನ ಬಜ್ಪೆ ಸಮೀಪದ ಮರವೂರು ಬಳಿ ಇರುವ ಫಲ್ಗುಣಿ ನದಿ ಉಕ್ಕಿ ಹರಿಯುತ್ತಿದೆ. ಫಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಲಾಗಿದ್ದ ಅಣೆಕಟ್ಟು ಪೂರ್ತಿಯಾಗಿ ಮುಳುಗಿ ಹೋಗಿದೆ. ಹಾಗಾಗಿ ಅಣೆಕಟ್ಟಿನ ಮೇಲಿನಿಂದಲೇ ನೀರು ರಭದಲ್ಲಿ ಹರಿಯುತ್ತಿದೆ. ಇದರಿಂದಾಗಿ ಆಣೆಕಟ್ಟು ಪ್ರದೇಶದ ಸುತ್ತಮತ್ತಲಿನ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಭೀತಿ ಉಂಟಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv