ಡಿಸಿಎಂ ಪರಮೇಶ್ವರ್​ಗೆ ಬೆಳ್ಳಿ ಗಧೆ ನೀಡಿ ಅಭಿನಂದಿಸಿದ ನಾಯಕರು

ಬೆಂಗಳೂರು: ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಇಂದು ದಿನೇಶ್ ಗುಂಡೂರಾವ್ ಅಧಿಕಾರ ಸ್ವೀಕರಿಸಲಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ನಿರ್ಗಮಿತ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್​​ಗೆ ಅಭಿನಂದನೆ ಸಲ್ಲಿಸಲಾಯ್ತು. 8 ವರ್ಷಗಳ ಕಾಲ ಡಾ.ಜಿ. ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಬೆಳ್ಳಿ ಗಧೆ ನೀಡಿ ಅಭಿನಂದಿಸಲಾಯ್ತು. ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯಗೂ ಶಾಲು ಹೊದಿಸುವ ಮೂಲಕ ಕಾಂಗ್ರೆಸ್ ನಾಯಕರು ಅಭಿನಂದನೆ ಸಲ್ಲಿಸಿದ್ರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv