ಮಗ ವಾಪಾಸ್​​ ಬರದಿದ್ದರೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ

ವಿಜಯಪುರ: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್​ ಹಂತಕ ಎಂದು ಹೇಳಲಾಗುತ್ತಿರುವ ಪರಶುರಾಮ ವಾಗ್ಮೋರೆ ತಾಯಿ ಜಾನಕಿಬಾಯಿ ಅಸ್ವಸ್ಥಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಸಿಂದಗಿಯ ಅವರ ಮನೆಯಲ್ಲಿ ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಗೌರಿ ಲಂಕೇಶ್​ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಎಸ್‌.ಐ.ಟಿ ತಂಡ ಪರಶುರಾಮನನ್ನು 14 ದಿನಗಳ ಕಾಲ ವಶಕ್ಕೆ ಪಡೆದಿತ್ತು. ಬಳಿಕ ಅವರ ತಾಯಿ ಅಸ್ವಸ್ಥಗೊಂಡಿದ್ದರು. ನನ್ನ ಮಗ ವಾಪಾಸ್​​ ಮನೆಗೆ ಬರದಿದ್ದರೆ ನಾವು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv