ಸಿಇಒ ವಿರುದ್ಧ ಎಸಿಬಿಗೆ ಜಿಪಂ ಅಧ್ಯಕ್ಷೆ ದೂರು..!

ದಾವಣಗೆರೆ: ಜಿಲ್ಲಾ ಪಂಚಾಯತ್​ ಸಿಇಒ ವಿರುದ್ಧ ಉದ್ಯೋಗ​ ಖಾತ್ರಿ ಯೋಜನೆಯಡಿ ಕೋಟ್ಯಂತರ ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಪಂಚಾಯತ್​ ಅಧ್ಯಕ್ಷೆ ಜಯಶೀಲಾ ಕೆ.ಆರ್​​ ಎಸಿಬಿಗೆ ದೂರು ನೀಡಿದ್ದಾರೆ. ಜಿಲ್ಲಾ ಪಂಚಾಯತ್​ ಸಿಇಒ ಅಶ್ವತಿ ವಿರುದ್ಧ ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಿ ಜಿ.ಪಂ. ಅಧ್ಯಕ್ಷೆ ಎಸಿಬಿಗೆ ದೂರು ನೀಡಿದ್ದಾರೆ. ಸಿಇಒ ವಿರುದ್ಧ ಆರೋಪ ಮಾಡಿರುವ ಜಿ.ಪಂ. ಅಧ್ಯಕ್ಷೆ ದೂರನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಜಿಲ್ಲೆಯ ಗ್ರಾಮ ಪಂಚಾಯತ್​​ ಅಭಿವೃದ್ಧಿ ಅಧಿಕಾರಿಗಳು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾ ಪಂಚಾಯತ್​ ಆವರಣದಲ್ಲಿ ಪಿಡಿಒ ಅಧಿಕಾರಿಗಳು ಪ್ರತಿಭಟನೆ ನಡೆಸಿದ್ದು, ಕೂಡಲೇ ಜಿಲ್ಲಾ ಪಂಚಾಯತ್​ ಅಧ್ಯಕ್ಷೆ ಕ್ಷಮೆ ಕೋರಬೇಕೆಂದು ಪಂಚಾಯತ್​ ಅಭಿವೃದ್ಧಿ ಅಧಿಕಾರಿಗಳು ಆಗ್ರಹಿಸಿದ್ದಾರೆ.