ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ, ವ್ಯಕ್ತಿ ಸಾವು

ದಾವಣಗೆರೆ: ರಸ್ತೆ ಬದಿ ಹೋಗುತ್ತಿದ್ದ ವ್ಯಕ್ತಿಗೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದ ಬಳಿ ನಡೆದಿದೆ. ಸೋಮಶೆಟ್ಟಿಹಳ್ಳಿ ಗ್ರಾಮದ ಉಮೇಶ್(42) ಮೃತಪಟ್ಟ ವ್ಯಕ್ತಿ. ಚನ್ನಗಿರಿಯಿಂದ ದಾವಣಗೆರೆ ಕಡೆ ಕೆಎಸ್ಆರ್ಟಿಸಿ ಬಸ್ ಹೋಗುತ್ತಿತ್ತು. ಈ ವೇಳೆ ಪಾದಚಾರಿಗೆ ಬಸ್ ಡಿಕ್ಕಿ ಹೊಡೆದಿದೆ. ನಂತರ ಭತ್ತದ ಹುಲ್ಲು ತುಂಬಿದ್ದ ಟ್ಯಾಕ್ಟರ್‌ಗೂ ಬಸ್ ಗುದ್ದಿದೆ. ಚನ್ನಗಿರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ  ಘಟನೆ ನಡೆದಿದೆ.
ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv