ಅಪರಿಚಿತ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ, ಆಸ್ಪತ್ರೆಗೆ ದಾಖಲು

ರಾಯಚೂರು: ಮಸ್ಕಿ ಪಟ್ಟಣದ ಮುದುಗಲ್​ ರಸ್ತೆಯ ಅಶೋಕ ಶಿಲಾ ಶಾಸನದ ಬಳಿ 40 ವರ್ಷದ ವ್ಯಕ್ತಿಯೊಬ್ಬರ ಕೊಲೆಗೆ ಯತ್ನಿಸಿದ ಘಟನೆ ಇಂದು ಬೆಳಗಿನ ಜಾವ ನಡೆದಿದೆ.
ಬೆಳಗಿನ ಜಾವ ಶಿಲಾಶಾಸನದ ಬಳಿ ಮಲಗಿದ್ದ ವ್ಯಕ್ತಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಹಲ್ಲೆ ನಡೆಸಿದವರು ಯಾರು ಎಂಬುದು ತಿಳಿದುಬಂದಿಲ್ಲ. ಹಲ್ಲೆಗೊಳಗಾಗಿರುವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು ಆತನ ಗುರುತು ಪತ್ತೆಯಾಗಿಲ್ಲ. ತೀವ್ರವಾಗಿ ಗಾಯಗೊಂಡಿರುವ ವ್ಯಕ್ತಿಯನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಸಬ್​​ ಇನ್ಸ್​​ಪೆಕ್ಟರ್​​ ಅಮರೇಶ್​​ ಹುಬ್ಬಳ್ಳಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಮಸ್ಕಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv