ಹರಕೆ ತೀರಿಸಿದ ದೇವೇಗೌಡ ತೆಲ್ಲೂರು

ಕಲಬುರ್ಗಿ: ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಕ್ಕೆ ಜಿಲ್ಲಾ ಜೆಡಿಎಸ್​ ಪ್ರಧಾನ ಕಾರ್ಯದರ್ಶಿ ದೇವೇಗೌಡ ತೆಲ್ಲೂರು ಶರಣಬಸವೇಶ್ವರ ದೇವರಿಗೆ ದೀರ್ಘ ದಂಡ ನಮಸ್ಕಾರ ಹಾಕಿದ್ದಾರೆ.

ಚುನಾವಣೆ ಸಮಯದಲ್ಲಿ ದೇವೇಗೌಡ ತೆಲ್ಲೂರು ಕುಮಾರಣ್ಣ ಮುಖ್ಯಮಂತ್ರಿ ಆಗಲಿ ಎಂದು ಶರಣಬಸವೇಶ್ವರ ದೇವಸ್ಥಾನದಲ್ಲಿ ಹರಕೆ ಕಟ್ಟಿಕೊಂಡಿದ್ದರು. ಹೆಚ್​ಡಿಕೆ ಸಿಎಂ ಆಗಿದ್ದರಿಂದಾಗಿ ದೇವೇಗೌಡ ತೆಲ್ಲೂರು ದೇವಸ್ಥಾನದ ಆವರಣದಲ್ಲಿ ಧೀರ್ಘದಂಡ ನಮಸ್ಕಾರ ಹಾಕಿ ಹರಕೆ ತೀರಿಸಿದ್ದಾರೆ. ಈ ವೇಳೆ ಜಿಲ್ಲಾ ಜೆಡಿಎಸ್​​ ಮುಖಂಡರು, ಜೆಡಿಎಸ್​ ಕಾರ್ಯಕರ್ತರು ಉಪಸ್ಥಿತರಿದ್ದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv