ಪತ್ನಿ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಪಾಪಿ ಗಂಡ..!

ಚಿತ್ರದುರ್ಗ: ಪತ್ನಿಯ ಮೇಲೆ ಪತಿಯೇ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಚಿತ್ರದುರ್ಗ ತಾಲೂಕಿನ ಬಬ್ಬಲರಂಗವ್ವನಹಳ್ಳಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.
ಶ್ರೀಧರ ಪೂಜಾರಿ ಪತ್ನಿಯನ್ನು ಹತ್ಯೆಗೈದ ವ್ಯಕ್ತಿ. ತನ್ನ ಪತ್ನಿ ಸಾಕಮ್ಮ(26)ನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿದ್ದಾನೆ. ರಾತ್ರಿ ಇಬ್ಬರು ಮಕ್ಕಳೊಂದಿಗೆ ಮಲಗಿದ್ದಾಗ ಪತ್ನಿಯ ಮೇಲೆ ಶ್ರೀಧರ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಕುಡಿದ ಅಮಲಿನಲ್ಲಿ ಪತಿ ಈ ಕೃತ್ಯ ಎಸಗಿದ್ದಾನೆ ಎಂದು ಶಂಕಿಸಲಾಗಿದೆ. ಪತ್ನಿಯ ಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಕುರಿತು ತುರುವನೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv