ಸುಗಮ ಸಂಚಾರಕ್ಕೆ ಪೆರುಂಬಾಡಿ-ಮಾಕುಟ್ಟ ರಸ್ತೆ ಮುಕ್ತ

ಮಡಿಕೇರಿ: ಜೂನ್​ ತಿಂಗಳಲ್ಲಿ ಸುರಿದ ಭಾರಿ ಮಳೆಯಿಂದ ಹಾನಿಗೊಳಗಾಗಿದ್ದ ಕೊಣನೂರು-ಮಾಕುಟ್ಟ ರಾಜ್ಯ ಹೆದ್ದಾರಿಯಲ್ಲಿರುವ ಪೆರಂಬಾಡಿ-ಮಾಕುಟ್ಟವರೆಗಿನ ರಸ್ತೆ ಹಾಗೂ ಸೇತುವೆಗಳನ್ನು ದುರಸ್ತಿ ಕಾರ್ಯ ಮಾಡಾಗಿದ್ದು, ಇಂದಿನಿಂದ ಲಘು ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆ.
ಪೆರುಂಬಾಡಿಯಿಂದ ಮಾಕುಟ್ಟವರೆಗಿನ ರಸ್ತೆ ಬದಿಯಲ್ಲಿ ಮಳೆ, ಗಾಳಿಗೆ ಬಿದ್ದ ಮರಗಳು ಹಾಗೂ ಅಪಾಯದ ಸ್ಥಿತಿಯಲ್ಲಿರುವ ಮರಗಳನ್ನು ತೆರವುಗೊಳಿಸಿ, ಕುಸಿದಿದ್ದ ರಸ್ತೆಯ ದುರಸ್ತಿ ಕಾರ್ಯ ಮಾಡಲಾಗಿದೆ. ದ್ವಿಚಕ್ರ, ತ್ರಿ-ಚಕ್ರ ಮತ್ತು ನಾಲ್ಕು ಚಕ್ರದ ಲಘು ವಾಹನಗಳು ಮಾತ್ರ ಸಂಚರಿಸಲು ಅನುವು ಮಾಡಿಕೊಡಲಾಗಿದೆ ಅಂತಾ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ತಿಳಿಸಿದ್ದಾರೆ. ಅಲ್ಲದೇ ಸಾರ್ವಜನಿಕರ ಸುರಕ್ಷತೆ ನಿಟ್ಟಿನಲ್ಲಿ ಈ ಭಾಗದಲ್ಲಿ ಪ್ಯಾಟ್ರೋಲಿಂಗ್ ತಂಡವನ್ನು ನಿಯೋಜಿಸಲಾಗಿದೆ ಅಂತಾ ತಿಳಿಸಿದರು. ಲಘು ವಾಹನ ಹೊರತುಪಡಿಸಿ ಉಳಿದಂತೆ ಎಲ್ಲಾ ತರಹೆದ ವಾಹನಗಳು ಬದಲಿ ರಸ್ತೆ ಗೋಣಿಕೊಪ್ಪಲು-ಪೊನ್ನಂಪೇಟೆ-ಶ್ರೀಮಂಗಲ-ಕುಟ್ಟ ಮಾರ್ಗವಾಗಿ ಸಂಚರಿಸಲು ಅನುಕೂಲ ಮಾಡಿಕೊಡಲಾಗಿದೆ.
ಮತ್ತೆ ಮಳೆ ಆತಂಕ..!
ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟ ಬೆನ್ನಲ್ಲೇ, ಶುಕ್ರವಾರದಿಂದ ಶುರುವಾಗಿರುವ ಪುನರ್ವಸು ಮಳೆ ಜಿಲ್ಲೆಯಾದ್ಯಂತ ಆರ್ಭಟಿಸುತ್ತಿದ್ದು, ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ:contact@firstnews.tv