ಪೆಟ್ರೋಲ್​ ಡೀಸೆಲ್​ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ದಾವಣಗೆರೆ: ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ ಕಾರ್ಯಕರ್ತರು ಪ್ರತಿಭಟನೆ ಮಾಡಿದರು. ದಾವಣಗೆರೆ ನಗರದ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವಂತೆ ಕೇಂದ್ರ ಸರ್ಕಾರವನ್ನ ಒತ್ತಾಯಿಸಿದರು. ರಾಜ್ಯ ವಿಧಾನಸಭಾ ಚುನಾವಣೆ ಮುಗಿಯೋವರೆಗೂ ಸುಮ್ಮನಿದ್ದು ಈಗ ಬೆಲೆ ಏರಿಕೆ ಮಾಡಿದ್ದಾರೆ. ಪದೇ ಪದೇ ತೈಲ ಬೆಲೆ ಏರಿಕೆಯಿಂದ ನಿತ್ಯ ಬಳಕೆ ವಸ್ತುಗಳ ಬೆಲೆಯೂ ಏರಿಕೆ ಆಗುತ್ತಿದೆ. ಕೇಂದ್ರ ಸರ್ಕಾರ ಬಡವರು ಹಾಗೂ ಮಧ್ಯಮವರ್ಗದವರ ಮೇಲೆ ಗಧಾಪ್ರಹಾರ ಮಾಡುತ್ತಿದೆ ಎಂದು ಪ್ರತಿಭಟನಾನಿರತರು ಹೇಳಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv