ಪೆಟ್ರೋಲ್ ಟ್ಯಾಂಕರ್ ಗೋಡೆಗೆ ಡಿಕ್ಕಿ: ತಪ್ಪಿದ ಭಾರಿ ಅನಾಹುತ

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಆವರಣದ ಗೋಡೆಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್​ ಭಾರೀ ಅನಾಹುತ ತಪ್ಪಿದೆ. ಈ ಘಟನೆ ಕುಂದಾಪುರ ತಾಲೂಕಿನ ಹಾಲಾಡಿ ಕಕ್ಕುಂಜೆ ಕ್ರಾಸ್ ಬಳಿ ನಡೆದಿದೆ.
ಮಂಗಳೂರಿನಿಂದ ಶಿವಮೊಗ್ಗ ಕಡೆ ತೆರಳುತ್ತಿದ್ದ ಪೆಟ್ರೋಲ್​ ಟ್ಯಾಂಕರ್, ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ರಸ್ತೆಯಿಂದ ಕೆಳಗಿಳಿದು ಆವರಣ ಗೋಡೆಗೆ ಡಿಕ್ಕಿಯಾಗಿ ಒರಗಿ ನಿಂತಿದೆ. ಈ ವೇಳೆ ಟ್ಯಾಂಕರ್​ನಿಂದ ಅಲ್ಪ ಪ್ರಮಾಣದಲ್ಲಿ ಪೆಟ್ರೋಲ್ ಸೋರಿಕೆಯಾಗಿದೆ. ಆವರಣದ ಕಂಪೌಂಡ್​ ಪೂರ್ತಿಯಾಗಿ ಹಾನಿಯಾಗಿದೆ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಟ್ಯಾಂಕರ್ ಮೇಲಕ್ಕೆ ಎತ್ತಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv