ಐಐಐಟಿ ಕಟ್ಟಡ ನಿರ್ಮಾಣಕ್ಕೆ ಮೋದಿ ಶಂಕುಸ್ಥಾಪನೆ

ಹುಬ್ಬಳ್ಳಿ: ವಾಣಿಜ್ಯ ನಗರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಹಲವು ಸರ್ಕಾರಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಶಿಕ್ಷಣ ಕಾಶಿ ಧಾರವಾಡದಲ್ಲಿ ಐಐಟಿ, ರಾಯಚೂರಿನಲ್ಲಿ ಐಐಐಟಿ ಕಟ್ಟಡಗಳ ನಿರ್ಮಾಣ ಹಾಗೂ ಚಿಕ್ಕಜಾಜೂರು ಜಂಕ್ಷನ್​ -ಮಾಯಕೊಂಡ ವರೆಗೂ ಜೋಡಿ ರೈಲು ಮಾರ್ಗ, ಪ್ರಧಾನ ಮಂತ್ರಿ ಆವಾಸ್​​ ಯೋಜನೆಯಡಿ ನಿರ್ಮಾಣವಾದ ಮನೆಗಳ ಹಸ್ತಾಂತರ ಸೇರಿದಂತೆ ಅನೇಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದೇಶಪಾಂಡೆ, ಕೇಂದ್ರ ಸಚಿವ ಸದಾನಂದ ಗೌಡ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​ ಯಡಿಯೂರಪ್ಪ, ಸಂಸದ ಪ್ರಹ್ಲ್ಲಾದ್​ ಜೋಷಿ, ಇನ್ಫೋಸಿಸ್​ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಸೇರಿದಂತೆ ಹಲವಾರು ಗಣ್ಯರು ಭಾಗಿಯಾಗಿದ್ರು.