‘ಕರ್ನಾಟಕದ ಅಷ್ಟೂ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡಿ, ನಿಮ್ಮ ಪ್ರೀತಿ ನನ್ನಮೇಲಿರಲಿ’

ಕೊಪ್ಪಳ: ಭಯಂಕರ ಬಿಸಿಲಿನಲ್ಲಿಯೂ ನಾಲ್ಕೂ ದಿಕ್ಕುಗಳಿಂದ ಜನರೇ ಕಣ್ಣಿಗೆ ಕಾಣಿಸುತ್ತಿದ್ದಾರೆ. ಇಲ್ಲಿನ ಈ ಹವಾ, ಜನ ಪ್ರವಾಹ ನೋಡಿದರೆ ಅದು ಯಾವ ದಿಕ್ಕಿನತ್ತ ಸಾಗುತ್ತಿದೆ ಎಂಬುದನ್ನು ನಾನು ಅರ್ಥ ಮಾಡಿಕೊಳ್ಳಬಲ್ಲೆ. ಬಿಜೆಪಿ ಅಭ್ಯರ್ಥಿಗಳಿಗೆ ನಿಮ್ಮ ಆಶೀರ್ವಾದ ಇರಲಿ. ನಿಮ್ಮ ಆಶೀರ್ವಾದಕ್ಕಾಗಿ ನಾನು ಮತ್ತೊಮ್ಮೆ ಇಲ್ಲಿಗೆ ಬಂದಿರುವೆ. ಇಲ್ಲಿನ ಮೂರೂ ಅಭ್ಯರ್ಥಿಗಳನ್ನು ನೀವು ಗೆಲ್ಲಿಸಿಕೊಡಬೇಕು. ಬರೀ ಈ ಮೂವರಷ್ಟೇ ಅಲ್ಲ. ಕರ್ನಾಟಕದ ಅಷ್ಟೂ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡಿ. ನಿಮ್ಮ ಪ್ರೀತಿ ನನ್ನ ಮೇಲೆ ಇರಲಿ. ನಿಮಗೆಲ್ಲ ನಾನು ಆಭಾರಿ ಎಂದು ಪ್ರಧಾನಿ ಮೋದಿ ಹೇಳಿದರು. ಲೋಕಸಭಾ ಚುನಾವಣೆ ಅಂಗವಾಗಿ ಕೊಪ್ಪಳ ಸುತ್ತಮುತ್ತಲ ಮೂರು ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಪ್ರಧಾನಿ ನರೇಂದ್ರ ಮೋದಿ ಗಂಗಾವತಿಗೆ ಆಗಮಿಸಿದ್ದಾರೆ.


Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv