26 ಕ್ವಿಂಟಾಲ್ ಪಡಿತರ ಅಕ್ಕಿ ಅಕ್ರಮ, ಒರ್ವನ ಬಂಧನ

ದಾವಣಗೆರೆ: ಪಡಿತರ ಅಕ್ಕಿಯನ್ನ ಅಕ್ರಮವಾಗಿ ದಾಸ್ತಾನು ಮಾಡಿದ್ದ ಓರ್ವ ವ್ಯಕ್ತಿಯನ್ನ ಪೊಲೀಸರು ಬಂಧಿಸಿದ್ದು, ಅಕ್ಕಿಯನ್ನ ವಶಪಡಿಸಿಕೊಂಡಿದ್ದಾರೆ.
ಚನ್ನಗಿರಿ ತಾಲೂಕಿನ ಬಸವಪಟ್ಟಣದಲ್ಲಿ ಡಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ 26 ಕ್ವಿಂಟಾಲ್ ಅಕ್ಕಿಯನ್ನು ದಾಸ್ತಾನು ಮಾಡಿದ್ದ ಆರೋಪದಡಿ ಮೊಹಿಬುಲ್ಲಾ (43) ಎಂಬಾತನನ್ನ ಬಂಧಿಸಿದ್ದಾರೆ. ಈತ ಪಡಿತರ ಅಕ್ಕಿ ಸಂಗ್ರಹಿಸಿ ಪಾಲಿಶ್ ಮಾಡಿ ಬೇರೆ ಕಡೆ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಡಿಸಿಬಿ ಇನ್​​ಸ್ಪೆಕ್ಟರ್​​ ಟಿ.ವಿ. ದೇವರಾಜ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಘಟನೆ ಕುರಿತು ಬಸವಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv