ಜನಸಂಖ್ಯಾ ಜಾಗೃತಾ ಜಾಥಾ

ಕೋಲಾರ: ನಗರದಲ್ಲಿಂದು ಜನಸಂಖ್ಯಾ ದಿನಾಚರಣೆ ಅಂಗವಾಗಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ನಡೆಯಿತು. ಜನಸಂಖ್ಯೆ ಸ್ಫೋಟದಿಂದ ಆಗುವಂತಹ ದುಷ್ಪರಿಣಾಮದ ಕುರಿತು ಜಾಥಾ ಮೂಲಕ ಅರಿವು ಮೂಡಿಸಲಾಯಿತು. ಕೋಲಾರದ ಪ್ರವಾಸಿ ಮಂದಿರದಿಂದ ಪ್ರಾರಂಭವಾದ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚಾರಿಸುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv