ಸಿದ್ದರಾಮಯ್ಯರನ್ನ ಭೇಟಿ ಮಾಡಿ ಆಶೀರ್ವಾದ ಪಡೆದ ಪ್ರಜ್ವಲ್ ರೇವಣ್ಣ

ಬೆಂಗಳೂರು: ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಇಂದು ಮಾಜಿ ಸಿಎಂ ಸಿದ್ದರಾಮಯ್ಯರನ್ನ ಭೇಟಿ ಮಾಡಿದರು. ಈ ವೇಳೆ ಹಾಸನದಲ್ಲಿ  ಕಾಂಗ್ರೆಸ್​ ಸಹಾಯದಿಂದ ಗೆಲ್ಲಲು ಅಶೀರ್ವದಿಸುವಂತೆ ಪ್ರಜ್ವಲ್ ಮನವಿ ಮಾಡಿದರು. ಹಾಸನದಲ್ಲಿ ಕೆಲವು ಕಾಂಗ್ರೆಸ್ ನಾಯಕರು ಪ್ರಜ್ವಲ್​ ರೇವಣ್ಣ ವಿರುದ್ಧ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಭೇಟಿ ಬಳಿಕ ಮಾತನಾಡಿದ ಪ್ರಜ್ವಲ್, ಸಿದ್ದರಾಮಯ್ಯನವರ ಆಶೀರ್ವಾದ ಪಡೆದುಕೊಂಡಿದ್ದೇನೆ. ಕಡೂರು, ಅರಕಲಗೂಡು, ಅರಸೀಕೆರೆ, ಹಾಸನದಲ್ಲಿ ಪ್ರಚಾರಕ್ಕೆ ಬರುತ್ತೇನೆ ಅಂತ ಅವರು ತಿಳಿಸಿದ್ದಾರೆ. ನಾನು ಚಿಕ್ಕವನಾಗಿದ್ದಾಗಿಂದಲೂ ಸಿದ್ದರಾಮಯ್ಯನವರನ್ನು ನೋಡಿಕೊಂಡು ಬೆಳೆದಿದ್ದೇನೆ. ನಮ್ಮ ಮನೆಯವರೊಂದಿಗೆ ಸಿದ್ದರಾಮಯ್ಯ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಹೀಗಾಗಿ ಅವರನ್ನು ಭೇಟಿಯಾಗಿದ್ದೇನೆ. ಸಚಿವ ಪರಮೇಶ್ವರ್, ದಿನೇಶ್ ಗುಂಡೂರಾವ್​ರನ್ನೂ ಭೇಟಿ ಮಾಡಿ, ಅವರ ಆಶೀರ್ವಾದವನ್ನೂ ಪಡೆಯುತ್ತೇನೆ ಎಂದು ತಿಳಿಸಿದರು.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv