ಮಹಿಷ ದಸರಾ ಆಚರಣೆಗೆ ಸರ್ಕಾರ ಅವಕಾಶ ಕೊಡಬಾರದಿತ್ತು: ಪ್ರತಾಪ್ ಸಿಂಹ

ಮೈಸೂರು: ಮಹಿಷ ದಸರಾ ಆಚರಣೆಗೆ ಸರ್ಕಾರ ಅವಕಾಶ ಕೊಡಬಾರದಿತ್ತು. ಇದು ಜನರ ಭಾವನೆಗೆ ಸಂಬಂಧಿಸಿದ ವಿಚಾರ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ನಾಡಹಬ್ಬ ದಸರಾ ಉದ್ಘಾಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ​ಮಹಿಷ ಎಂದರೆ ಎಮ್ಮೆ. ಅದನ್ನು ಚಾಮುಂಡೇಶ್ವರಿಗಿಂತ ಶ್ರೇಷ್ಠ ಎನ್ನುವಂತೆ ಬಿಂಬಿಸುವ ಪ್ರಯತ್ನ ನಡೆದಿದೆ. ಇದನ್ನ ಸಿಎಂ ಕುಮಾರಸ್ವಾಮಿ ಅವರ ಗಮನಕ್ಕೆ ತರಬೇಕಾಗಿತ್ತು. ಇದನ್ನು ರಾಜಕೀಯ ಕಾರಣಗಳಿಗಾಗಿ ಪ್ರಸ್ತಾಪಿಸುತ್ತಿಲ್ಲ ಎಂದು ಸಂಸದ ಪ್ರತಾಪ್​ ಸಿಂಹ ಹೇಳಿದ್ರು. ಕೆಲ ದಿನಗಳ ಹಿಂದೆ ವಿಚಾರವಾದಿ ಪ್ರೊ.ಭಗವಾನ್‌ ಸೇರಿದಂತೆ ಹಲವು ಪ್ರಗತಿಪರ ಚಿಂತಕರು ಮಹಿಷ ದಸರಾ ಆಚರಣೆ ಮಾಡಿದ್ದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವ, ಶಾಸಕ ಸತೀಶ್‌ ಜಾರಕಿಹೊಳಿ ಕೂಡ ಭಾಗಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸಂಸದ ಪ್ರತಾಪ್‌ ಸಿಂಹ ಈ ಬಗ್ಗೆ ಆಕ್ಷೇಪವೆತ್ತಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv