ಯಡಿಯೂರಪ್ಪಗೆ ಹಿನ್ನಡೆಯಾಗಲಿ ಎಂದು ವಿಶೇಷ ಪೂಜೆ.!

ಹಾಸನ: ಬಹುಮತ ಸಾಬೀತುಪಡಿಸುವ ಹಿನ್ನಲೆಯಲ್ಲಿ ಯಡಿಯೂರಪ್ಪನವರಿಗೆ ಹಿನ್ನಡೆಯಾಗಲಿ ಎಂದು ಸಕಲೇಶಪುರದ ಸಕಲೇಶ್ವರ ದೇವಾಲಯದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿ, ಉರುಳು ಸೇವೆಯನ್ನು ನಡೆಸಿದ್ದಾರೆ.
ಯಡಿಯೂರಪ್ಪನವರಿಗೆ ಹಿನ್ನಡೆಯಾಗಬೇಕು. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಲಿ. ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದವರು ಒಟ್ಟಾಗಿ ಅಧಿಕಾರ ಹಿಡಿದು ಜನರ ಸಮಸ್ಯೆಗೆ ಸ್ಪಂದಿಸಲಿ ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ್ರು. ಸಕಲೇಶಪುರ ಶಾಸಕ ಎಚ್ ಕೆ ಕುಮಾರಸ್ವಾಮಿ ಮಂತ್ರಿಯಾಗಿ ಹೊರಹೊಮ್ಮಲಿ ಎಂದ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರು ದೇವರಲ್ಲಿ ಪ್ರ್ರಾರ್ಥಿಸಿದ್ರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv