ಕನ್ನಡಿಗರಿಗೆ ಕನ್ನಡದಲ್ಲೇ ಯುಗಾದಿ ಶುಭಾಶಯ ತಿಳಿಸಿದ ರಾಷ್ಟ್ರಪತಿ

ಇಂದು ಯುಗಾದಿ.. ಕರ್ನಾಟಕದೆಲ್ಲೆಡೆ ಸಂಭ್ರಮ ಮನೆಮಾಡಿದೆ. ವರ್ಷದ ಆರಂಭದ ದಿನವಾದ ಇಂದು ಕನ್ನಡಿಗರೆಲ್ಲರೂ ಪರಸ್ಪರ ಬೇವು-ಬೆಲ್ಲ ಹಂಚಿ ಸಂಭ್ರಮಿಸುತ್ತಿದ್ದಾರೆ. ಈ ಹಿನ್ನೆಲೆ ಕನ್ನಡಿಗರಿಗೆ ರಾಷ್ಟ್ರಪತಿ ರಾಮ್​ನಾಥ್​ ಕೋವಿಂದ್​ ಶುಭಾಶಯ ತಿಳಿಸಿದ್ದಾರೆ. ಈ ಕುರಿತಂತೆ ಟ್ವೀಟ್​ ಮಾಡಿರುವ ರಾಷ್ಟ್ರಪತಿ, ‘ಕರ್ನಾಟಕದ ಸಹೋದರ-ಸಹೋದರಿಯರಿಗೆ ಮತ್ತು ಜಗತ್ತಿನಾದ್ಯಂತ ನೆಲೆಸಿರುವ ಕನ್ನಡಿಗರಿಗೆ ಯುಗಾದಿಯ ಶುಭಾಶಯಗಳು. ಈ ಸಂವತ್ಸರವು ಎಲ್ಲರಿಗೂ ಸಂತಸ, ಶಾಂತಿ ಮತ್ತು ಸಮೃದ್ಧಿಯನ್ನು ತರಲಿ ಅಂತಾ ಹಾರೈಸಿದ್ದಾರೆ.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv