ಪ್ರಧಾನಿ ಜನ್ಮದಿನ: ಮಾರಿಕಾಂಬಾ ದೇವಸ್ಥಾನದಲ್ಲಿ ವಿಶೇಷ ಪೂಜೆ

ಶಿರಸಿ: ಪ್ರಧಾನಿ ನರೇಂದ್ರ ಮೋದಿಯವರ 68ನೇ ಜನ್ಮದಿನದ ಅಂಗವಾಗಿ ಶಿರಸಿಯಲ್ಲಿ ವಿಶೇಷ ಪೂಜೆ ನಡೆಯಿತು. ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ, ಪಕ್ಷದ ಕಾರ್ಯಕರ್ತರು ಮತ್ತು ಮೋದಿಯವರ ಅಭಿಮಾನಿಗಳೊಂದಿಗೆ ಶಿರಸಿಯ ಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಅವರು, ದೇಶದಲ್ಲಿ ಮೋದಿಯವರು ಅತ್ಯುತ್ತಮ ನಾಯಕತ್ವ ನೀಡುತ್ತಾ ಇದ್ದಾರೆ. ಜಗತ್ತಿಗೇ ಅವರು ಹೆಮ್ಮೆಯ ನಾಯಕರು. ನಮ್ಮ ದೇಶವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸುತ್ತಿರುವ ಮಾನ್ಯ ಪ್ರಧಾನಿ ಮೋದಿಜಿಯವರಿಗೆ ದೇವರು ಆಯುಷ್ಯ, ಆರೋಗ್ಯವನ್ನು ಕರುಣಿಸಲಿ. ಮುಂದಿನ ಅವಧಿಗೂ ಅವರೇ ಪ್ರಧಾನ ಮಂತ್ರಿಯಾಗಿ ಮುಂದುವರೆಯಲಿ ಅಂತಾ ಜಗನ್ಮಾತೆ ದೇವಿಯಲ್ಲಿ ಪ್ರಾರ್ಥಿಸಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv