ಪ್ರಿಯಾಂಕ್ ಖರ್ಗೆಗೆ ಸಚಿವ ಸ್ಥಾನ, ಅಭಿಮಾನಿಗಳ ಸಂಭ್ರಮಾಚರಣೆ

ಕಲಬುರ್ಗಿ: ಕಾಂಗ್ರೆಸ್-ಜೆಡಿಎಸ್‌‌ ಸಮ್ಮಿಶ್ರ ಸರ್ಕಾರದಲ್ಲಿ ಪ್ರಿಯಾಂಕ್ ಖರ್ಗೆಗೆ ಸಂಪುಟ ದರ್ಜೆ ಸಚಿವ ಸ್ಥಾನ ಸಿಕ್ಕಿದ ಹಿನ್ನೆಲೆಯಲ್ಲಿ ನಗರದ ಬಸ್ ನಿಲ್ದಾಣದ ಬಳಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಖರ್ಗೆ ಬೆಂಬಲಿಗರು ಸಂಭ್ರಮಾಚರಣೆ ಮಾಡಿದ್ದಾರೆ. ಪ್ರಿಯಾಂಕ್ ಖರ್ಗೆ, ಚಿತ್ತಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ, ಇವರಿಗೆ ದಲಿದ ವರ್ಗದಲ್ಲಿ ಸಚಿವ ಸ್ಥಾನ ನೀಡಲಾಗಿದೆ. ಈ ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಖರ್ಗೆ ಐಟಿ-ಬಿಟಿ ಸಚಿವರಾಗಿದ್ದರು. ಖರ್ಗೆ ಬೆಂಬಲಿಗರು ಪರಸ್ಪರ ಸಿಹಿಹಂಚಿ ಸಂಭ್ರಮಿಸಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv