ವಾರಣಾಸಿಯಲ್ಲಿ ಮೋದಿ ವಿರುದ್ಧ ಪ್ರಿಯಾಂಕ ವಾದ್ರಾ ಕಣಕ್ಕೆ..!?

ವಾರಣಾಸಿ (ಉತ್ತರ ಪ್ರದೇಶ): ಪ್ರಧಾನಿ ನರೇಂದ್ರ ಮೋದಿ ಸ್ಪರ್ಧೆ ಮಾಡುತ್ತಿರೋ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್​ ಪ್ರಧಾನಕಾರ್ಯದರ್ಶಿ ಪ್ರಿಯಾಂಕ  ವಾದ್ರಾ ಸ್ಪರ್ಧೆ ಮಾಡುವ ಸಾಧ್ಯತೆ ಇದೆ ಅಂತಾ​ ವರದಿಯಾಗಿದೆ. ಈ ಮೂಲಕ ವಾರಣಾಸಿಯಲ್ಲಿ ಹೈವೋಲ್ಟೇಜ್ ಕದನ ಏರ್ಪಡುವ ಸಾಧ್ಯತೆ ಇದೆ.

ಮೂಲಗಳ ಪ್ರಕಾರ ಪ್ರಿಯಾಂಕಾ ಗಾಂಧಿ, ಪ್ರಧಾನಿ ಮೋದಿ ವಿರುದ್ಧ ಅಖಾಡಕ್ಕೆ ಇಳಿಯಲು ಒಪ್ಪಿಕೊಂಡಿದ್ದಾರಂತೆ. ಈ ಹಿಂದೆ ಪ್ರಿಯಾಂಕ ಅವರ ಬೆಂಬಲಿಗರು ಸೋನಿಯಾ ಗಾಂಧಿ ಕ್ಷೇತ್ರ ರಾಯ್​ಬರೇಲಿ ಅಥವಾ ರಾಹುಲ್ ಅವ್ರ ಕ್ಷೇತ್ರ ಅಮೇಥಿಯಲ್ಲಿ ಸ್ಪರ್ಧೆ ಮಾಡುವಂತೆ ಒತ್ತಾಯ ಮಾಡಿದ್ದರು. ಇದೀಗ ವಾರಣಾಸಿಯಿಂದ ಸ್ಪರ್ಧೆ ಮಾಡುವ ವಿಚಾರವಾಗಿ ಪ್ರಿಯಾಂಕ ಗಾಂಧಿ, ಕಾಂಗ್ರೆಸ್​ ಕಾರ್ಯಕರ್ತರ ಜೊತೆ ಮಾತುಕತೆ ಕೂಡ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್ ವಿರುದ್ಧ ಬರೋಬ್ಬರಿ 3,71,784 ಮತಗಳ ಅಂತರದಿಂದ ಗೆದ್ದಿದ್ದರು. ಮೋದಿ 5,81,022 ವೋಟ್​ ಪಡೆದ್ರೆ, ಅರವಿಂದ್ ಕೇಜ್ರಿವಾಲ್ 2,09,238 ಮತಗಳನ್ನ ಪಡೆದಿದ್ರು.