ತನ್ವೀರ್​​​ ಸೇಠ್​​​​ಗೆ ಮಂತ್ರಿ ಸ್ಥಾನ ತಪ್ಪಿದ್ದಕ್ಕೆ ಬೆಂಬಲಿಗರ ಆಕ್ರೋಶ

ಮೈಸೂರು: ಸಮ್ಮಿಶ್ರ ಸರ್ಕಾರದ ಉಭಯ ಪಕ್ಷಗಳ ಸಚಿವರ ಪಟ್ಟಿ ಹೊರಬಿದ್ದು, ಪ್ರಮಾಣ ವಚನ ಸ್ವೀಕಾರವೂ ಮುಗಿದಿದೆ. ಇದರ ಬೆನ್ನಲ್ಲೇ ಭಿನ್ನಮತ ಕೂಡ ಹೊಗೆಯಾಡುತ್ತಿದೆ. ಕಾಂಗ್ರೆಸ್​ನ ಕೆಲವು ಹಿರಿಯ ನಾಯಕರು ಸಚಿವ ಸ್ಥಾನದಿಂದ ವಂಚಿತರಾಗಿದ್ದಾರೆ. ಇದು ಅವರ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ. ಮೈಸೂರಿನ ನರಸಿಂಹರಾಜ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿರುವ ತನ್ವೀರ್​ ಸೇಠ್​​ಗೂ ಸಚಿವ ಸ್ಥಾನ ತಪ್ಪಿದೆ. ಈ ಹಿನ್ನೆಲೆಯಲ್ಲಿ ಇಂದು ಅವರ ಬೆಂಬಲಿಗರು ಮೈಸೂರು-ಬೆಂಗಳೂರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಹೈಕಮಾಂಡ್​ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮೈಸೂರು ಜಿಲ್ಲೆಯಲ್ಲಿ ಕಾಂಗ್ರೆಸ್​ನ​​​ ಯಾರೊಬ್ಬರಿಗೂ ಕಾಂಗ್ರೆಸ್​​ನಿಂದ ಮಂತ್ರಿ ಸ್ಥಾನ ನೀಡಿಲ್ಲ ಅಂತಾ ಅಸಮಾಧಾನ ಹೊರ ಹಾಕಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv