ಸುಪ್ರೀಂಕೋರ್ಟ್‌ ತೀರ್ಪನ್ನ ವಿರೋಧಿಸಿ ಅಯ್ಯಪ್ಪ ಸ್ವಾಮಿ ಭಕ್ತರ ಪ್ರೊಟೆಸ್ಟ್​

ಮೈಸೂರು: ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಎಲ್ಲ ಮಹಿಳೆಯರು ಹೋಗಬಹುದು ಎಂಬ ಸುಪ್ರೀಂಕೋರ್ಟ್‌ ತೀರ್ಪನ್ನ ವಿರೋಧಿಸಿ ಇಂದು ಮೈಸೂರಿನಲ್ಲಿ ಅಯ್ಯಪ್ಪ ಸ್ವಾಮಿ ಭಕ್ತರು ಪ್ರತಿಭಟನೆ ನಡೆಸಿದ್ರು. ನಗರದ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಬಳಿ ಪ್ರತಿಭಟನೆ ನಡೆಸಿ, ಭಿತ್ತಿ ಪತ್ರಗಳನ್ನು ಹಿಡಿದು ತೀರ್ಪು ಮರು ಪರಿಶೀಲನೆ ಆಗ್ರಹಿಸಿದ್ರು. 850ಕ್ಕೂ ಹೆಚ್ಚು ಇತಿಹಾಸ ಇರುವ ದೇವಾಲಯಕ್ಕೆ 10ವರ್ಷ ಮೇಲ್ಪಟ್ಟ ಮತ್ತು 55ವರ್ಷದೊಳಗಿನ ಮಹಿಳೆಯರ ಪ್ರವೇಶಕ್ಕೆ ವಿರೋಧವಿದೆ. ಹೀಗಾಗಿ, ಸುಪ್ರೀಂಕೋರ್ಟ್‌ ತನ್ನ ತೀರ್ಪನ್ನು ಮರು ಪರಿಶೀಲಿಸಬೇಕೆಂದು ಆಗ್ರಹಿಸಿದ್ರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv