ಚಿಕಿತ್ಸೆ ನೀಡಲು ನಿರ್ಲಕ್ಷ್ಯಿಸಿದ ವೈದ್ಯನ ವಿರುದ್ಧ ಪ್ರತಿಭಟನೆ

ಹುಬ್ಬಳ್ಳಿ: ನಗರದ ರೈಲ್ವೆ ಆಸ್ಪತ್ರೆಯ ವೈದ್ಯ ಡಾ.ಕನಕರಾಯ, ರೈಲ್ವೆ ಉದ್ಯೋಗಿಯೊಬ್ಬರ ಪತ್ನಿಗೆ ಸರಿಯಾದ ಚಿಕಿತ್ಸೆ ನೀಡದೆ ನಿರ್ಲಕ್ಷ್ಯವಹಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ರೈಲ್ವೆ ಉದ್ಯೋಗಿ ಸತೀಶ್ ಎಂಬುವವರ ಪತ್ನಿ ಪದ್ಮಾವತಿ ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿದ್ದರು. ಇವರನ್ನು ರೈಲ್ವೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಿಡ್ನಿ ಸ್ಟೋನ್ ಹೊರ ತಗೆಯಲು ಡಾ. ಕ‌ನಕರಾಯರೇ ಶಸ್ತ್ರ ಚಿಕಿತ್ಸೆ ಮಾಡಿದ್ದರು. ಆಪರೇಷನ್ ಮಾಡಿದ ವೈದ್ಯ ಮುಂದಿನ ಚಿಕಿತ್ಸೆ ನೀಡದೆ ನಿರ್ಲಕ್ಷ್ಯವಹಿಸಿದ್ದಾರಂತೆ. ಹೀಗಾಗಿ ಪದ್ಮಾವತಿಯನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಿದ್ದೇವೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ರೈಲ್ವೆ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಖಂಡಿಸಿ ಆಸ್ಪತ್ರೆಯ ಮುಂದೆ ರೈಲ್ವೆ ನೌಕರರು ಪ್ರತಿಭಟನೆಗೆ ಮುಂದಾಗಿದ್ದಾರೆ. 2 ನೂರಕ್ಕೂ ಅಧಿಕ ಸಂಖ್ಯೆಯಲ್ಲಿ ಜಾಮಾವಣೆಗೊಂಡ ರೈಲ್ವೆ ನೌಕರರು ನಿರ್ಲಕ್ಷ್ಯವಹಿಸಿರುವ ವೈದ್ಯರನ್ನು ಅಮಾನತ್ತು ಮಾಡಬೇಕೆಂದೂ ಆಗ್ರಹಿಸಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv