ರಫೇಲ್ ಡೀಲ್ ವಿರೋಧಿಸಿ, ಕೈ ಕಾರ್ಯಕರ್ತರಿಂದ ಪ್ರತಿಭಟನೆ

ಶಿರಸಿ: ಕೇಂದ್ರ ಸರ್ಕಾರದ ರಫೇಲ್ ಡೀಲ್ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತ್ತು. ನಗರದ ಮುಖ್ಯ ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ_ ಕಾರ್ಯಕರ್ತರು ರಫೇಲ್ ಯುದ್ದ ವಿಮಾನ ಹಗರಣವನ್ನು ಜಂಟಿ ಸಂಸದಿಯ ಸಮಿತಿಗೆ ತನಿಖೆ ಮಾಡಲು ಒಪ್ಪಿಸುವಂತೆ ಆಗ್ರಹಿಸಿದರು. ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ಪ್ರತಿಭಟನೆ ಮಾಡಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ, ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತ್ತು. ಪ್ರತಿಭಟನೆಯಲ್ಲಿ ಜಿಲ್ಲೆಯ ಸಿದ್ದಾಪುರ, ಯಲ್ಲಾಪುರ, ಮುಂಡಗೋಡ ಸೇರಿದಂತೆ ವಿವಿಧ ತಾಲೂಕಿನ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv