‘ಕಾಲ’ ಚಿತ್ರ ಬಿಡುಗಡೆ ವಿರೋಧಿಸಿ ಕರವೇ ಪ್ರತಿಭಟನೆ

ಹಾಸನ: ರಜನಿಕಾಂತ್ ಅಭಿನಯದ ಕಾಲ ಚಿತ್ರ ಬಿಡುಗಡೆಗೆ ವಿರೋಧಿಸಿ ಹಾಸನದಲ್ಲಿ ಪ್ರವೀಣ್ ಶೆಟ್ಟಿ ಬಣದ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ಕಾವೇರಿ ವಿಚಾರದಲ್ಲಿ ಕನ್ನಡಿಗರ ವಿರುದ್ಧವಾಗಿ ರಜನಿಕಾಂತ್ ಮಾತನಾಡಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಕಾಲ ಚಿತ್ರವನ್ನು ಬಿಡುಗಡೆ ಮಾಡಬಾರದು ಅಂತಾ ಕರ್ನಾಟಕ ರಕ್ಷಣ ವೇದಿಕೆ ಕಾರ್ಯಕರ್ತರು ಆಗ್ರಹಿಸಿದರು.