ಖಾಸಗಿ ಕೃಷಿ ಕಾಲೇಜುಗಳಿಗೆ ಅನುಮತಿ: ಮುಂದುವರಿದ ಪ್ರತಿಭಟನೆ

ರಾಯಚೂರು: ಖಾಸಗಿ ಕೃಷಿ ಕಾಲೇಜುಗಳಿಗೆ ಅನುಮತಿ ನೀಡದಂತೆ ಆಗ್ರಹಿಸಿ ರಾಯಚೂರು ಕೃಷಿ ವಿವಿ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ರು. ತರಗತಿಗಳನ್ನು ಬಹಿಷ್ಕರಿಸಿದ ನೂರಾರು ವಿದ್ಯಾರ್ಥಿಗಳು ಕೃಷಿ ವಿವಿಯಿಂದ ಪ್ರತಿಭಟನಾ ಮೆರವಣಿಗೆ ಮೂಲಕ ನಗರದ ಬಸವೇಶ್ವರ ವೃತ್ತಕ್ಕೆ ಆಗಮಿಸಿದ್ರು. ಅಲ್ಲದೆ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದ್ರು. ಇದ್ರಿಂದ ಕೆಲ ಸಮಯ ಸಂಚಾರ ಅಸ್ತವ್ಯಸ್ಥ ಉಂಟಾಯಿತು. ಇನ್ನು ಖಾಸಗಿ ರೈಟೇಕ್ ಕೃಷಿ ಪದವಿ ಕಾಲೇಜ್​ಗೆ ನೀಡಿರುವ ಅನುಮತಿಯನ್ನು ನಿರ್ಬಂಧಿಸುವಂತೆ ಆಗ್ರಹಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ಕೂಗಿ ಆಕ್ರೋಶ ಹೊರ ಹಾಕಿದ್ರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: conatct@firstnews.tv