ನೀರಾವರಿ ನಿಗಮದ ಕೇಂದ್ರ ಕಚೇರಿ ಸ್ಥಳಾಂತರಿಸದಂತೆ ಪ್ರೊಟೆಸ್ಟ್​​

ಧಾರವಾಡ: ನೀರಾವರಿ ನಿಗಮದ ಕೇಂದ್ರ ಕಚೇರಿ ಸ್ಥಳಾಂತರ ಮಾಡುವುದನ್ನ ಕೈಬಿಟ್ಟು, ಧಾರವಾಡದಲ್ಲಿಯೇ ಮುಂದುವರೆಸುವಂತೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ಕಾರ್ಯಕರ್ತರು ಸಂಸ್ಥೆಯನ್ನು ಧಾರವಾಡದಿಂದ ಉತ್ತರ ಕರ್ನಾಟಕದ ಬೇರೆ ಕಡೆಗೆ ಸ್ಥಳಾಂತರಿಸಬಾರದು ಎಂದು ಆಗ್ರಹಿಸಿದರು. ಸಮ್ಮಿಶ್ರ ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಹಕಾರ ನೀಡುತ್ತಿಲ್ಲ. ಬದಲಿಗೆ ಉತ್ತರ ಕರ್ನಾಟಕದಲ್ಲಿರುವ ಅನೇಕ ಕಚೇರಿಗಳನ್ನ ಬೇರೆಡೆ ಸ್ಥಳಾಂತರ ಮಾಡಿ, ಪ್ರಾದೇಶಿಕ ಅಸಮತೋಲನ ಮಾಡುತ್ತಿದೆ ಎಂದು ಆರೋಪಿಸಿದರು. ಜಿಲ್ಲಾಧಿಕಾರಿಗಳ ಮುಖೇನ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.