ಸರ್ಕಾರಿ ಶಾಲೆಗಳ ವಿಲೀನ ವಿರೋಧಿಸಿ ಪ್ರತಿಭಟನೆ

ರಾಯಚೂರು: ಮಕ್ಕಳ ಸಂಖ್ಯೆ ಕಡಿಮೆ ಇರುವ ಸರ್ಕಾರಿ ಶಾಲೆಗಳ ವಿಲೀನಕ್ಕೆ ಸರ್ಕಾರ ಮುಂದಾಗಿರುವುದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಈ ನಿರ್ಧಾರ ಕೈಬಿಡುವಂತೆ ಆಗ್ರಹಿಸಿ ಸಮಾನ ಶಾಲಾ ಶಿಕ್ಷಣ ಹೋರಾಟ ಸಮಿತಿಯ ಸದಸ್ಯರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಕಾರರು ಅಂಬೇಡ್ಕರ್ ವೃತ್ತದಿಂದ ಡಿಸಿ ಕಚೇರಿವರೆಗೂ ಮೆರವಣಿಗೆ ನಡೆಸಿದರು. ಈ ವೇಳೆ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಮುಖಾಂತರ ಸಿಎಂಗೆ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ನಿರ್ಧಾರ ಕೈ ಬಿಡುವಂತೆ ಮನವಿ ಮಾಡಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.com