ಶಬರಿ ಮಲೈ ಮಹಿಳೆಯರ ಪ್ರವೇಶ: ಸುಪ್ರೀಂ ತೀರ್ಪು ಖಂಡಿಸಿ ಪ್ರತಿಭಟನೆ

ದಾವಣಗೆರೆ: ಶಬರಿಮಲೈ ದೇವಸ್ಥಾನಕ್ಕೆ ಎಲ್ಲ ವಯಸ್ಸಿನ ಮಹಿಳೆಯರಿಗೆ ಪ್ರವೇಶ ನೀಡಿರುವುದನ್ನು ಖಂಡಿಸಿ ಅಯ್ಯಪ್ಪ ಭಕ್ತ ವೃಂದದಿಂದ ಪ್ರತಿಭಟನೆ ನಡೆಸಲಾಯಿತು.
ಹಿಂದು ಜಾಗರಣಾ ವೇದಿಕೆ ಹಾಗೂ ಶಬರಿಮಲೈ ಅಯ್ಯಪ್ಪ ಸೇವಾ ಸಮಾಜಂ ವತಿಯಿಂದ ಪ್ರತಿಭಟನೆ ಆಯೋಜಿಸಲಾಗಿತ್ತು. ಪ್ರತಿಭಟನೆಯಲ್ಲಿ ಕೇಸರಿ ಧ್ವಜ ಹಿಡಿದು ನೂರಾರು ಅಯ್ಯಪ್ಪ ಭಕ್ತರು ಹಾಗೂ ಹಿಂದೂ ಕಾರ್ಯಕರ್ತರು ಭಾಗಿಯಾಗಿದ್ದರು. ಇದೇ ವೇಳೆ ಶಬರಿಮಲೈ ದೇವಸ್ಥಾನಕ್ಕೆ ಮಹಳೆಯರಿಗೆ ಪ್ರವೇಶ ಕಲ್ಪಿಸಿರುವ ಸುಪ್ರೀಂಕೋರ್ಟ ತೀರ್ಪು ಖಂಡಿಸಿ, ಘೋಷಣೆ ಕೂಗಿದರು.
ನಾವು ಮಾಡುತ್ತಿರುವ ಪ್ರತಿಭಟನೆ ಮಹಿಳಾ ವಿರೋಧಿ ನೀತಿ ಅಲ್ಲ. ಅಯ್ಯಪ್ಪನ ಸನ್ನಿಧಿಯಲ್ಲಿ ಅನಾದಿ ಕಾಲದಿಂದ ನಡೆದು ಬಂದ ಪದ್ಧತಿ. ಮೂಲ ಸಾಂಪ್ರದಾಯಿಕ ಪದ್ಧತಿಗೆ ಧಕ್ಕೆಯಾಗಬಾರದು. ಧಾರ್ಮಿಕ ವಿಷಯದಲ್ಲಿ ನ್ಯಾಯಾಲಯಗಳು ಮಧ್ಯಪ್ರವೇಶ ಮಾಡಬಾರದು. ಕೂಡಲೇ ಸುಪ್ರೀಂಕೋರ್ಟ್ ಕೊಟ್ಟ ತೀರ್ಪು ಹಿಂಪಡೆಯಬೇಕೆಂದು ಅಯ್ಯಪ್ಪ ಭಕ್ತರು ಆಗ್ರಹಿಸಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv