ಟಿಪ್ಪು ಜಯಂತಿ ವಿರೋಧಿಸಿ ಜಿಲ್ಲಾ ಬಿಜೆಪಿ ಪ್ರತಿಭಟನೆ

ದಾವಣಗೆರೆ: ಟಿಪ್ಪು ಜಯಂತಿ ಆಚರಣೆಯನ್ನ ವಿರೋಧಿಸಿ ನಗರದಲ್ಲಿ ಬಿಜೆಪಿ ಕಾರ್ಯಕತರು ಪ್ರತಿಭಟನೆ ನಡೆಸಿದರು. ಶಾಸಕ ಎಸ್.ಎ. ರವೀಂದ್ರನಾಥ್ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಿಂದ ನಗರದ ಗಾಂಧಿ ಸರ್ಕಲ್ ಮೂಲಕ, ಪ್ರತಿಭಟನಾ ಱಲಿ ಎಸಿ ಕಚೇರಿ ತಲುಪಿ ಅಲ್ಲಿ ಟಿಪ್ಪು ಜಯಂತಿ ಮಾಡದಂತೆ ಆಗ್ರಹಿಸಿದರು. ಈ ವೇಳೆ ಬಿಜೆಪಿ ಕಾರ್ಯಕತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv