ರಾಮಲಿಂಗಾರೆಡ್ಡಿಗೆ ಸಚಿವ ಸ್ಥಾನ ತಪ್ಪಿದ್ದಕ್ಕೆ ಆಕ್ರೋಶ

ಕಲಬುರ್ಗಿ: ಮಾಜಿ ಸಚಿವ ರಾಮಲಿಂಗಾರೆಡ್ಡಿಗೆ ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಚಿವ ಸ್ಥಾನ ನೀಡದಿರುವ ಕ್ರಮವನ್ನ ವಿರೋಧಿಸಿ ನಗರದಲ್ಲಿ ರೆಡ್ಡಿ ಸಮುದಾಯದ‌ ವತಿಯಿಂದ ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ರು. ಈ ವೇಳೆ ರಾಹುಲ್ ಗಾಂಧಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ರು. ಅಪವಿತ್ರ ಮೈತ್ರಿ ಸರ್ಕಾರಕ್ಕೆ ಧಿಕ್ಕಾರ ಎಂಬ ಘೋಷಣೆಗಳನ್ನು ಕೂಗಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv