ಸಾಲ ಮನ್ನಾಗೆ ಆಗ್ರಹಿಸಿ ಪ್ರೊಟೆಸ್ಟ್​

ಬಳ್ಳಾರಿ: ಸಾಲ ಮನ್ನಾಗೆ ಆಗ್ರಹಿಸಿ ನಗರದಲ್ಲಿಂದು ರಾಜ್ಯ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ರೈತ ಸಂಘದ ಕಾರ್ಯಕರ್ತರು, ಸಿಎಂ ಕುಮಾರಸ್ವಾಮಿ ತಮ್ಮ ಚುನಾವಣೆ ಪ್ರಣಾಳಿಕೆಯಲ್ಲಿ ಸಾಲ ಮನ್ನಾ ಮಾಡೋದಾಗಿ ಘೋಷಿಸಿದ್ದರು. ಕೂಡಲೇ ಸಾಲ ಮನ್ನಾ ಮಾಡಬೇಕು. ಆಸೆ ತೋರಿಸಿ ಈಗ ದಿನ ದೂಡುತ್ತಿದ್ದಾರೆ ಎಂದು ಆರೋಪಿಸಿದರು. ಒಟ್ಟು 53 ಸಾವಿರ ಕೋಟಿ ಬೆಳೆ ಸಾಲ ಮನ್ನಾ ಮಾಡಲೇಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv