ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್​ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

ಶಿವಮೊಗ್ಗ : ಎಸ್ಸಿ-ಎಸ್ಟಿ ಸೇರಿದಂತೆ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್​ ಪಾಸ್ ನೀಡುವುದಾಗಿ ಸಿದ್ದರಾಮಯ್ಯ ಸರ್ಕಾರ ಘೋಷಣೆ ಮಾಡಿತ್ತು. ಈಗ ಹಣ ಇಲ್ಲ ಅಂತ ಕೇವಲ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲಾಗಿದೆ. ಹಾಗಾಗಿ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಬಸ್ ಸೌಲಭ್ಯ ಒದಗಿಸುವಂತೆ ಎಬಿವಿಪಿ ನೇತೃತ್ವದಲ್ಲಿ ಶಾಲಾ ವಿದ್ಯಾರ್ಥಿಗಳು ನಗರದಲ್ಲಿ ಪ್ರತಿಭಟನೆ ನಡೆಸಿದ್ರು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಉಚಿತ ಬಸ್ ನೀಡಿದ್ರೆ, ಶಾಲಾ -ಕಾಲೇಜಿಗೆ ಹೋಗುವುದಕ್ಕೆ ಅನುಕೂಲವಾಗುತ್ತದೆ. ಈ ಹಿಂದೆ ಸಿದ್ದರಾಮಯ್ಯನವರು ಘೋಷಣೆ ಮಾಡಿದಂತೆ ಎಲ್ಲ ವರ್ಗದವರಿಗೂ ಉಚಿತ ಬಸ್​ ನೀಡಲು ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv