ಮಾವು ಸಂಸ್ಕರಣಾ ಘಟಕ ತೆರೆಯುವಂತೆ ಆಗ್ರಹಿಸಿ ಪ್ರತಿಭಟನೆ

ಕೋಲಾರ: ಮಾವು ಸಂಸ್ಕರಣಾ ಘಟಕ ತೆರೆಯುವಂತೆ ಆಗ್ರಹಿಸಿ ರಾಜ್ಯದ ಮಾವಿನ ತವರು ಕೋಲಾರ ಜಿಲ್ಲೆಯ ಡಿಸಿ ಕಛೇರಿ ಮುಂದೆ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು.
ಜಿಲ್ಲಾಧಿಕಾರಿ ಕಛೇರಿ ಬಳಿ ಮಾವಿನಕಾಯಿ ಸುರಿದು ವಿನೂತನ ಪ್ರತಿಭಟನೆ ಮಾಡಿದ ಪ್ರತಿಭಟನಾಕಾರರು, ಕೋಲಾರ ಜಿಲ್ಲೆಯಲ್ಲಿ ಒಟ್ಟು 45 ಸಾವಿರ ಹೆಕ್ಟೇರ್​ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತೆ. ಹೀಗಿದ್ರು ಒಂದೇ ಒಂದು ಮಾವು ಸಂಸ್ಕರಣಾ ಘಟಕ ಮಾಡಿಲ್ಲ ಅಂತಾ ಆಕ್ರೋಶ ವ್ಯಕ್ತಪಡಿಸಿದ್ರು.
ಮಾವಿಗೆ ಬೆಲೆ ಇಲ್ಲದೆ ರೈತರು ಕಂಗಾಲಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಕೂಡಲೇ ಜಿಲ್ಲಾಡಳಿತ ಸರ್ಕಾರದ ಗಮನ ಸೆಳೆದು ಮಾವು ಸಂಸ್ಕರಣಾ ಘಟಕ ಸ್ಥಾಪನೆ ಮಾಡಬೇಕು ಅಂತಾ ಆಗ್ರಹಿಸಿ ಕೋಲಾರ ಜಿಲ್ಲಾಧಿಕಾರಿ ಜಿ.ಸತ್ಯವತಿಗೆ ಮನವಿ ಸಲ್ಲಸಿದ್ರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv