ಲಾಠಿ ಚಾರ್ಜ್​ ಖಂಡಿಸಿ ರೈತ ಸಂಘಟನೆಗಳಿಂದ ಪ್ರತಿಭಟನೆ

ಹುಬ್ಬಳ್ಳಿ: ಮಂಗಳವಾರ ದೆಹಲಿಯಲ್ಲಿ ರೈತರ ಮೇಲಾದ ಲಾಠಿಚಾರ್ಜ್ ಖಂಡಿಸಿ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದರು.
ನಗರದ ಸಂಗೊಳ್ಳಿ ರಾಯಣ್ಣ ವೃತದಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತರು, ದೆಹಲಿ ಪೊಲೀಸ್ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕೃತಿ ದಹಿಸಲಾಯಿತು. ಕೇಂದ್ರ ಸರ್ಕಾರ ಈ ಹಿಂದೆ ಅಧಿಕಾರಕ್ಕೆ ಬರುವ ಮುಂಚೆ ರೈತರಿಗೆ ಹಲವು ಸೌಲಭ್ಯ ನೀಡುವುದಾಗಿ ಹೇಳಿತ್ತು. ಆದರೆ, ಈಗ ಪೊಲೀಸರ ಮೂಲಕ ರೈತರ ಮೇಲೆ ದೌರ್ಜನ್ಯ ನಡೆಸುತ್ತಿದೆ ಎಂದು ಆರೋಪಿಸಿದರು.

ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಪ್ರತಿಭಟನೆ ಮಾಡಿದ ರೈತರ ಮೇಲೆ ಫಿರಂಗಿಗಳನ್ನು ಸಿಡಿಸಿ ದೌರ್ಜನ್ಯ ಮಾಡಲಾಗಿದೆ ಎಂದು ದೂರಿದರು. ಕೂಡಲೇ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ರೈತರ ಮೇಲೆ ದೌರ್ಜನ್ಯ ನಡೆಸಿದ ದೆಹಲಿ ಪೊಲೀಸರ ಮೇಲೆ ಶಿಸ್ತುಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv