5 ತಿಂಗಳನಿಂದ ಪ್ರೋತ್ಸಾಹ ಧನ ನೀಡಿಲ್ಲ ಎಂದು ಪ್ರತಿಭಟನೆ

ಧಾರವಾಡ: ಜಿಲ್ಲೆಯ ಆಶಾ ಕಾರ್ಯಕರ್ತೆಯರಿಗೆ 5 ತಿಂಗಳನಿಂದ ಪ್ರೋತ್ಸಾಹ ಧನ ನೀಡಿಲ್ಲ ಎಂದು ಆರೋಪಿಸಿ ಆಶಾ ಕಾರ್ಯಕರ್ತೆಯರು ಇಂದು ಪ್ರತಿಭಟನೆ ನಡೆಸಿದರು.
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತೆಯರು ಭಾಗಿಯಾಗಿದ್ದರು. ಇದೇ ವೇಳೆ ಜಿಲ್ಲಾಧಿಕಾರಿಗಳ ಎದುರು ತಮಗೆ ಪ್ರೋತ್ಸಾಹ ಧನ ಬಾರದ ಕುರಿತಾಗಿ ಅಳಲು ತೊಡಿಕೊಂಡರು. ಆಶಾ ಕಾರ್ಯಕರ್ತೆಯರ ಅಹವಾಲು ಸ್ವೀಕರಿಸಿದ ಜಿಲ್ಲಾಧಿಕಾರಿಗಳು, ಈ ಕುರಿತು ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಭರವಸೆ ನೀಡಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv