ಜಾರಕಿಹೊಳಿ, ವೆಂಕಟಪ್ಪ ನಾಯಕಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ, ಪ್ರತಿಭಟನೆ

ರಾಯಚೂರು: ನಾಯಕ ಸಮಾಜದ ಸತೀಶ್​ ಜಾರಕಿಹೊಳಿ ಹಾಗೂ ರಾಜಾ ವೆಂಕಟಪ್ಪ ನಾಯಕರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಲಿಂಗಸುಗೂರು ತಾಲ್ಲೂಕು ವಾಲ್ಮೀಕಿ ಸಮಾಜ ವತಿಯಿಂದ ಪ್ರತಿಭಟನೆ ನಡೆಯಿತು. ಲಿಂಗಸುಗೂರು ವಾಲ್ಮೀಕಿ ಭವನದಿಂದ ಬಸ್ ನಿಲ್ದಾಣ ವೃತ್ತದ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ್ರು. ಬಸ್ ನಿಲ್ದಾಣ ವೃತ್ತದಲ್ಲಿ ಟೈರ್​ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ರು. ತಮ್ಮ ಸಮುದಾಯದವರಿಗೆ ಸಚಿವ ಸ್ಥಾನ ನೀಡದ ಹಿನ್ನೆಲೆ, ಸಮ್ಮಿಶ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv