ಶಿವಶಂಕರಪ್ಪರಿಗೆ ಸಚಿವ ಸ್ಥಾನ ನೀಡದಿದ್ರೆ ಉಗ್ರ ಹೋರಾಟ..!

ದಾವಣಗೆರೆ: ಹಿರಿಯ ಕಾಂಗ್ರೆಸ್​ ಮುಖಂಡ ಹಾಗೂ ಪ್ರಬಲ ವೀರಶೈವ ಲಿಂಗಾಯತ ಮುಖಂಡರೂ ಆದ ಶಾಮನೂರು ಶಿವಶಂಕರಪ್ಪಗೆ ಸಚಿವ ಸ್ಥಾನ ಕೈ-ತಪ್ಪಿದ ಹಿನ್ನೆಲೆಯಲ್ಲಿ ಅಖಿಲ ಭಾರದ ವೀರಶೈವ ಮಹಾಸಭಾ ಪ್ರತಿಭಟನೆ ನಡೆಸಿತು. ನಗರದ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಮೈತ್ರಿ ಸರ್ಕಾರದ ಸಚಿವ ಸಂಪುಟದಲ್ಲಿ ವೀರಶೈವ ಲಿಂಗಾಯತರಿಗೆ ಅನ್ಯಾಯವಾಗಿದೆ ಅಂತಾ ಆರೋಪ ಮಾಡಿದ್ರು. ವೀರಶೈವ ಲಿಂಗಾಯತ ಮಹಾಸಭಾಗೆ, ಪಾಲಿಕೆ ಕಾರ್ಪೊರೇಟರ್​ಗಳು ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ರು. ಒಂದು ವೇಳೆ ಶಾಮನೂರು ಶಿವಶಂಕರಪ್ಪಗೆ ಸಚಿವ ಸ್ಥಾನ ನೀಡದಿದ್ರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ರು. ಇನ್ನು, ಸಚಿವ ಸ್ಥಾನ ಸಿಗದಿದ್ದನ್ನು ಖಂಡಿಸಿ ದಾವಣಗೆರೆ ಎಪಿಎಂಸಿಯ ಕಾಂಗ್ರೆಸ್​ನ ಅಧ್ಯಕ್ಷ, ಉಪಾಧ್ಯಕ್ಷ, ನಿರ್ದೇಶಕರು ರಾಜೀನಾಮೆ ನೀಡಿದ್ದಾರೆ. ಅಲ್ಲದೇ, ತಮ್ಮ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದು, ಎಪಿಎಂಸಿ ಅಧ್ಯಕ್ಷ ಮುದೇಗೌಡರ ಗಿರೀಶ್ ನೇತ್ರತ್ವದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿರುವ ಜಿ.ಪರಮೇಶ್ವರ್ ಗೆ ರಾಜೀನಾಮೆ ಪತ್ರ ರವಾನೆ ಮಾಡಿದ್ದಾರೆ.