ಶರಣಬಸಪ್ಪಗೌಡ ದರ್ಶನಾಪುರ್​ಗೆ ಸಚಿವ ಸ್ಥಾನಕ್ಕೆ ಒತ್ತಾಯ​

ಯಾದಗಿರಿ: ನೂತನ ಸರ್ಕಾರದ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡದೆ ಯಾದಗಿರಿ ಜಿಲ್ಲೆಗೆ ಸರ್ಕಾರ ಅನ್ಯಾಯ ಮಾಡಿದೆ. ನಮ್ಮದು ಅತ್ಯಂತ ಹಿಂದುಳಿದ ಜಿಲ್ಲೆ. ಶಹಾಪೂರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಈ ಬಾರಿ 31,000 ಅಂತರ ಮತಗಳಿಂದ ಜಯ ಗಳಿಸಿದ್ದಾರೆ. ಹಿಂದೆ ಇಂಧನ ಹಾಗೂ ಕೃಷಿ ಮಾರುಕಟ್ಟೆ ಸಚಿವರಾಗಿ ಕೂಡಾ ಕಾರ್ಯನಿರ್ವಹಿಸಿದ್ದಾರೆ. ಹಿಂದಿನ ಸರ್ಕಾರದಲ್ಲಿ ಯಾದಗಿರಿಗೆ ಮೂರು ಜನ ಕಾಂಗ್ರೆಸ್ ಶಾಸಕರಿದ್ದರೂ, ಸಚಿವ ಸ್ಥಾನ ದೊರೆತಿಲ್ಲ. ಮಂತ್ರಿ ಮಂಡಲ ರಚನೆಯಾಗುವ ಮೊದಲೇ ನಮ್ಮ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ, ಸದಸ್ಯರು ಸೇರಿ ಮಾಜಿ ಸಿ.ಎಂ. ಸಿದ್ದರಾಮಯ್ಯ, ಕೆಪಿ‌ಸಿಸಿ ಅಧ್ಯಕ್ಷ ಪರಮೇಶ್ವರ್ ಮತ್ತು ಲೋಕಸಭೆಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕ ಶರಣಬಸಪ್ಪಗೌಡ‌ ದರ್ಶಾನಾಪೂರ್ ಸಚಿವ ಸ್ಥಾನ ಕೊಡಬೇಕೆಂದು ಮನವಿ ಮಾಡಿಕೊಂಡಿದ್ರೊ ಕೂಡ ಸಮಿಶ್ರ ಸರ್ಕಾರ ನಮ್ಮ ವಿನಂತಿಗೆ ಸ್ಪಂದಿಸಿಲ್ಲ.

ಇದರಿಂದ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲಿ ನಿರಾಶೆ ಉಂಟಾಗಿದೆ. ಸಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ ಪಕ್ಷದ ಕೋಟಾದಡಿ ಇನ್ನೂ ಖಾಲಿಯಿರುವ ಆರು ಸ್ಥಾನಗಳ ಪೈಕಿ ಒಂದು ಸ್ಥಾನವನ್ನು ಯಾದಗಿರಿ ಜಿಲ್ಲೆಯ ಶಹಾಪೂರ ಕಾಂಗ್ರೆಸ್ ಶಾಸಕ ಶರಣಬಸಪ್ಪಗೌಡ ದರ್ಶಾಪೂರ್ ಅವರಿಗೆ ನೀಡಲೇಬೇಕು. ಸರ್ಕಾರ ನಮ್ಮ ಮನವಿಗೆ ಸ್ಪಂದಿಸಿಲ್ಲ ಅಂದ್ರೆ ಹೋರಾಟ ಮಾಡುವುದಾಗಿ ಪಂಚಾಯತ್ ಅಧ್ಯಕ್ಷ ಬಸರೆಡ್ಡಿಗೌಡ ಎಂ.ಪಾಟೀಲ್ ಇಂದು ಸುದ್ದಿಗೋಷ್ಠಿಯಲ್ಲಿ ಎಚ್ಚರಿಸಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv