ಕಾಲಾ ಪ್ರದರ್ಶನಕ್ಕೆ ಮುಂದಾದ ರಾಧಿಕಾ ಚಿತ್ರ ಮಂದಿರದ ಮುಂದೆ ಪ್ರೊಟೆಸ್ಟ್​​

ಬಳ್ಳಾರಿ: ಕಾವೇರಿ ನದಿ ನೀರು ಹಂಚಿಕೆ ಕುರಿತಾದ ರಜನಿಕಾಂತ್​ ಹೇಳಿಕೆ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ಇಂದು ಕಾಲಾ ಚಿತ್ರ ಪ್ರದರ್ಶನಕ್ಕೆ ಬ್ರೇಕ್​ ಬಿದ್ದಿದೆ. ಆದರೆ ಗಣಿನಾಡು ಬಳ್ಳಾರಿಯಲ್ಲಿ ಮಾತ್ರ ಚಲನಚಿತ್ರ ಪ್ರದರ್ಶನಕ್ಕೆ ನಿರ್ಧರಿಸಲಾಗಿತ್ತು. ಬಿಗಿ ಪೋಲಿಸ್ ಬಂದೋಬಸ್ತ್​​​​ನಲ್ಲಿ ಚಿತ್ರ ಪ್ರದರ್ಶನ ಮಾಡಲು ಚಿತ್ರಮಂದಿರದ ಮಾಲೀಕರು ಮುಂದಾಗಿದ್ದರು. ನಗರದ ರಾಧಿಕಾ ಚಿತ್ರಮಂದಿರದಲ್ಲಿ ಕಾಲಾ ಪ್ರದರ್ಶನಕ್ಕೆ ಸಮಯವನ್ನು 10-30 ಕ್ಕೆ ನಿಗದಿಪಡಿಸಲಾಗಿತ್ತು. ಸೂಪರ್​ ಸ್ಟಾರ್​ ರಜನಿಕಾಂತ್ ಅಭಿಮಾನಿಗಳು ಸಾಲಿನಲ್ಲಿ ನಿಂತು ಟಿಕೆಟ್ ಪಡೆದುಕೊಳ್ಳು ಮುಂದಾಗಿದ್ದರು ಆದರೆ ಚಿತ್ರಮಂದಿರದ ಮುಂದೆ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ನಾವು ಯಾವುದೇ ಕಾರಣಕ್ಕೂ ಚಿತ್ರ ಪ್ರದರ್ಶನಕ್ಕೆ ಅವಕಾಶ ಕೊಡೋದಿಲ್ಲ ಎಂದು ಪ್ರೇಕ್ಷಕರನ್ನು ಥಿಯೇಟರ್ ಒಳಗೆ ಬಿಡುತ್ತಿಲ್ಲ. ಪ್ರತಿಭಟನಾಕಾರರ ಮನವೊಲಿಸಲು ಪೊಲೀಸರು ಯತ್ನಿಸುತ್ತಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv