ಸ್ಟೆರಾಲೈಟ್ ಕಂಪನಿ ವಿರುದ್ಧ ಸ್ಥಳೀಯರಿಂದ ಪ್ರೊಟೆಸ್ಟ್

ಆನೇಕಲ್: ಸ್ಟೆರ್‌ಲೈಟ್ ಕಾಪರ್ ಕಂಪನಿಯಿಂದ ಹೊರಬರುತ್ತಿರುವ ವಿಷಪೂರಿತ ಹೊಗೆಯಿಂದ ಪರಿಸರಕ್ಕೆ ಹಾನಿಯಾಗುತ್ತಿದೆ. ಇದರಿಂದ ಮಾರಕ ರೋಗ ಬರುವ ಸಾಧ್ಯತೆ ಇದೆ ಅಂತಾ ಕಂಪನಿ ವಿರುದ್ಧ ತಮಿಳುನಾಡಿನ ತೂತುಕುಡಿಯಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸಿದ್ರು.
ಪ್ರತಿಭಟನಾ ಜಾಥಾ ಜಿಲ್ಲಾಧಿಕಾರಿ ಕಚೇರಿ ಬಳಿ ತೆರಳುತ್ತಿದ್ದಂತೆ ಪ್ರತಿಭಟನಾಕಾರರು ಕಿಟಕಿಗೆ ಕಲ್ಲೆಸೆದು ತಮ್ಮ ಆಕ್ರೋಶ ಹೊರಹಾಕಿದರು. ಆಗ ಪ್ರತಿಭಟನೆ ಉಗ್ರ ಸ್ವರೂಪ ಪಡೆಯುತ್ತಿದ್ದಂತೆ ಉದ್ರಿಕ್ತ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿದರು ಹಾಗೂಲಾಠಿ ಚಾರ್ಜ್ ನಡೆಸಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv