ಅರ್ಜಿ ಹಾಕೋರಿಗೆಲ್ಲ ಹಾಸ್ಟೆಲ್ ಅವಕಾಶ ನೀಡುವಂತೆ ಆಗ್ರಹಿಸಿ, ಪ್ರತಿಭಟನೆ

ಕಾರವಾರ: ಹಾಸ್ಟೆಲ್​ಗೆ ಅರ್ಜಿ ಸಲ್ಲಿಸುವ ಎಲ್ಲಾ ವಿದ್ಯಾರ್ಥಿಗಳಿಗೆ ಅವಕಾಶ ನೀಡುವಂತೆ ಆಗ್ರಹಿಸಿ ನಗರದಲ್ಲಿ ಡಿಎಸ್ಎಸ್ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ ಹಾಗೂ ಅಲ್ಪಸಂಖ್ಯಾತ ಇಲಾಖೆ ವತಿಯಿಂದ ನಡೆಸುವ ಹಾಸ್ಟೆಲ್​ಗಳಿಗೆ ಸಾಕಷ್ಟು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುತ್ತಾರೆ. ಆದರೆ ಹಾಸ್ಟೆಲ್​ಗೆ ಅವಕಾಶ ಸಿಗದೇ ಇರುವವರು ಶಿಕ್ಷಣದಿಂದ ವಂಚಿತವಾಗುವ ಸಾಧ್ಯತೆಗಳಿವೆ. ಪ್ರತಿಯೊಬ್ಬರಿಗೂ ಶಿಕ್ಷಣ ಕೊಡಬೇಕೆನ್ನುವ ಸರ್ಕಾರದ ಉದ್ದೇಶದಂತೆ ಅರ್ಜಿ ಸಲ್ಲಿಸುವ ಎಲ್ಲ ವಿದ್ಯಾರ್ಥಿಗಳಿಗೂ ಹಾಸ್ಟೆಲ್​ನಲ್ಲಿ ಅವಕಾಶ ಕಲ್ಪಿಸಿ, ಶಿಕ್ಷಣ ಪೂರೈಸಲು ಅವಕಾಶ ಮಾಡಿಕೊಡುವಂತೆ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಆಗ್ರಹಿಸಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv