ಗುತ್ತಿಗೆದಾರರ ವಿವಿಧ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ

ಧಾರವಾಡ: ನೋಂದಾಯಿತ ಗುತ್ತಿಗೆದಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರದಲ್ಲಿ ಗುತ್ತಿಗೆದಾರರು ಪ್ರತಿಭಟನೆ ನಡೆಸಿದರು.
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಕಾಮಗಾರಿ ನಿರ್ವಹಿಸುವ ಗುತ್ತಿಗೆದಾರರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಉತ್ತರ ಕರ್ನಾಟಕದ ವಿವಿಧ ಇಲಾಖೆಗಳಲ್ಲಿ ಗುತ್ತಿಗೆದಾರರಿಗೆ ಪಾವತಿಸಬೇಕಾದ, ಸುಮಾರು ₹ 3,500 ಕೋಟಿ ಬಾಕಿ ಇದೆ. ಗುತ್ತಿಗೆದಾರರು ಜಿಎಸ್​ಟಿ ಬಂದ ನಂತರ ಹಲವಾರು ರೀತಿಯ ತೊಂದರೆ ಅನುಭವಿಸುವಂತಾಗಿದೆ. ಅದಲ್ಲದೆ ಟೆಂಡರ್ ವಿಷಯದಲ್ಲಿ ಕೂಡ ಅವ್ಯವಹಾರ ನಡೆಯುತ್ತಿದೆ. ಅದನ್ನ ಸರಿಪಡಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು. ಇದಲ್ಲದೆ ಗುತ್ತಿಗೆದಾರರ ಹಲವಾರು ಬೇಡಿಕೆಗಳಿವೆ. ಅವೆಲ್ಲವನ್ನೂ ಆದಷ್ಟು ಬೇಗ ಮುಖ್ಯಮಂತ್ರಿ ಅವರು ಪರಿಗಣಿಸಿ ಪರಿಹರಿಸಬೇಕೆಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv