‘ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಶಿಕ್ಷಣ ಕೊಡಿ​’

ಕೋಲಾರ: ಸರ್ಕಾರಿ ಶಾಲೆಗಳನ್ನು ಮುಚ್ಚುವ ಬದಲು ಸರ್ಕಾರಿ ಶಾಲೆಗಳಲ್ಲೂ ಎಲ್​.ಕೆ.ಜಿ. ಹಾಗೂ ಯು.ಕೆ.ಜಿ. ಪ್ರಾರಂಭ ಮಾಡಿ ಸರ್ಕಾರಿ ಶಾಲೆಯಲ್ಲೂ ಇಂಗ್ಲೀಷ್​ ಶಿಕ್ಷಣ ಕೊಡುವಂತೆ ಆಗ್ರಹಿಸಿ, ನಗರದ ಡಿಡಿಪಿಐ ಕಛೇರಿ ಎದುರು ಪ್ರೊ.ನಂಜುಂಡಸ್ವಾಮಿ ಸ್ಥಾಪಿತ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ರು. ಸರ್ಕಾರ ದಾಖಲಾತಿ ಇಲ್ಲವೆಂದು ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿದ್ದು ಇದರಿಂದ ಬಡ ಮಕ್ಕಳಿಗೆ ಶಿಕ್ಷಣ ಇಲ್ಲದಂತಾಗುತ್ತಿದೆ. ಮತ್ತೊಂದೆಡೆ ಖಾಸಗಿ ಶಾಲೆಗಳು ಪೋಷಕರಿಂದ ಹಣ ಸುಲಿಗೆ ಮಾಡುತ್ತಿವೆ. ಹಾಗಾಗಿ ಸರ್ಕಾರವೇ ಶಾಲೆಗಳಲ್ಲಿ ಇಂಗ್ಲೀಷ್ ಶಿಕ್ಷಣ ಆರಂಭಿಸಿ ಬಡ ಮಕ್ಕಳ ಶಿಕ್ಷಣಕ್ಕೆ ಅನುಕೂಲ ಮಾಡಬೇಕೆಂದು ಆಗ್ರಹಿಸಿ, ಉಪನಿರ್ದೇಶಕರಿಗೆ ಮನವಿ ಸಲ್ಲಿಸಿದ್ರು.

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ : contact@firstnews.tv