ಬಿಜೆಪಿ ಅಭ್ಯರ್ಥಿಗಳು ಮೋದಿ ಹೆಸರಿನಲ್ಲಿ ಮತ ಕೇಳ್ತಿದ್ದಾರೆ: ಆರ್. ವಿ ದೇಶಪಾಂಡೆ

ಹುಬ್ಬಳ್ಳಿ: ಉತ್ತರ ಕರ್ನಾಟಕದಲ್ಲಿ ಬಿಜೆಪಿ‌ ಅಭ್ಯರ್ಥಿಗಳು ಸಾಧನೆಯ‌ ಮೇಲೆ ಪ್ರಚಾರ ಮಾಡುತ್ತಿಲ್ಲ. ಮೋದಿ ಹೆಸರಿನಲ್ಲಿ ಮತ ಕೇಳುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್.ವಿ ದೇಶಪಾಂಡೆ  ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, 2014ರ ಚುನಾವಣೆಯಲ್ಲಿ ಬಿಜೆಪಿ ನೀಡಿದ ಮ್ಯಾನಿಫೆಸ್ಟ್ ಮರೆತು ಬಿಟ್ಟಿದೆ. ಕಾಂಗ್ರೆಸ್ ಪಕ್ಷ ಹಾಗೂ ಕಾರ್ಯಕರ್ತರು ಮಾಡುದ ಸಾಧನೆ ಇಟ್ಟು ಪ್ರಚಾರ ನಡೆಸುತ್ತಿದ್ದಾರೆ. ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಮಾಡುವ ಗುರಿ ಇದೆ. ರಾಜ್ಯ ಹಾಗೂ ಕೇಂದ್ರದಲ್ಲಿ‌ ನಮ್ಮ ಸರ್ಕಾರ ಇದ್ದಾಗ ಮಾಡಿದ ಸಾಧನೆ ಜನರಿಗೆ ಮುಟ್ಟಿಸುತ್ತಿದ್ದೇವೆ. ದೇಶದಲ್ಲಿ ರೈತರು ಸಂಕಷ್ಟದಲ್ಲಿ ಇದ್ದಾರೆ. ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ಸಿಗುತ್ತಿಲ್ಲ. ಎಲ್ಲ ವರ್ಗದ ರೈತರು ಅತಿವೃಷ್ಟಿ ಅನಾವೃಷ್ಟಿಯಿಂದ ತತ್ತರಿಸಿದ್ದಾರೆ ಎಂದು ಆರ್.ವಿ ದೇಶಪಾಂಡೆ ಹೇಳಿದರು.

ಮನಮೋಹನ್ ಸಿಂಗ್ ಕೇಂದ್ರದಲ್ಲಿ ಪ್ರಧಾನಿ ಇದ್ದಾಗ ₹ 72 ಸಾವಿರ ಕೋಟಿ ರೈತ ಸಾಲ ಮನ್ನಾ ಮಾಡಿದೆ.  ಈ ಬಾರಿ ಎನ್‌ಡಿಎ ಸರ್ಕಾರವನ್ನು ರೈತರು ಸಾಲ ಮನ್ನಾ ಮಾಡುವಂತೆ ಒತ್ತಾಯ ಮಾಡಿದ್ದರು. ಆದರೆ ಅದೂ ಆಗಲಿಲ್ಲ. ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇದ್ದಾಗ 8165 ಕೋಟಿ ರೂಪಾಯಿ ರೈತರ ಸಾಲ ಮನ್ನಾ ಮಾಡಿದ್ದೇವೆ. ಎನ್‌ಡಿಎ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ. ರಾಜ್ಯ ಹಾಗೂ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇದ್ದಾಗ ಸಾಕಷ್ಟು ಜನಪರ ಯೋಜನೆ ಜಾರಿಗೆ ತರಲಾಗಿದೆ. ಬಿಜೆಪಿ ಮ್ಯಾನಿಫೆಸ್ಟ್‌ನಲ್ಲಿ ಶಿಕ್ಷಣಕ್ಕೆ ಒತ್ತು ನೀಡಿಲ್ಲ
ನಮ್ಮ ಪ್ರಣಾಳಿಕೆಯಲ್ಲಿ ಶಿಕ್ಷಣ, ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ಎರಡು ಕೋಟಿ ಉದ್ಯೋಗ ಸೃಷ್ಟಿ ಎಲ್ಲಿವೆ. ಕೃಷಿ ಉತ್ಪಾದನೆ ಕಡಿಮೆಯಾಗಿದೆ ಕೇಂದ್ರ ಸರ್ಕಾರ ದೇಶದ ಅಭಿವೃದ್ಧಿಯಲ್ಲಿ ವಿಫಲವಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ದೇಶಪಾಂಡೆ ವಾಗ್ದಾಳಿ ನಡೆಸಿದರು.


Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv