ರಾಘವೇಂದ್ರ ಹಿಟ್ನಾಳ್​​​ಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ಪ್ರೊಟೆಸ್ಟ್​​

ಕೊಪ್ಪಳ: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವ ಸ್ಥಾನದಿಂದ ವಂಚಿತರಾದ ಶಾಸಕರ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ಕೊಪ್ಪಳದಲ್ಲಿಯೂ ಕುರುಬ ಸಮಾಜದ ಶಾಸಕ ರಾಘವೇಂದ್ರ ಹಿಟ್ನಾಳ್​​​ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಇಂದು ಹಾಲುಮತ ಸಮಾಜದ ಮುಖಂಡರು ಪ್ರತಿಭಟನೆ ನಡೆಸಿದರು.

ಕೊಪ್ಪಳದ ಅಶೋಕ ವೃತ್ತದಲ್ಲಿ ಸಮ್ಮಿಶ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಮುಖ್ಯಮಂತ್ರಿ ಕುಮಾರಸ್ವಾಮಿ ಕುರುಬ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದ್ರು. ಕುರುಬ ಸಮುದಾಯದವರಿಗೆ ಸಚಿವ ಸ್ಥಾನ ನೀಡದೆ ಹೋದ್ರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv